ವಿದ್ಯಾಸಿರಿ ಶಾಲೆಯ 7 ಮಕ್ಕಳು ನವೋದಯ ಶಾಲೆಗೆ ಆಯ್ಕೆ.

ಹೊಯ್ಸಳಕಟ್ಟೆ : ಬೋರನಕಣಿವೆ ವಿದ್ಯಾಸಿರಿ ನ್ಯಾಷನಲ್ ಪಬ್ಲಿಕ್ ಶಾಲೆಯ 7 ವಿದ್ಯಾರ್ಥಿಗಳು ಜವಾಹರ್ ನವೋದಯ ವಸತಿ ಶಾಲೆಗೆ ಆಯ್ಕೆಯಾಗಿದ್ದು, 20 ಕ್ಕಿಂತ ಹೆಚ್ಚು ಮಕ್ಕಳು ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ, ಮೌಲಾನ ಅಬ್ದುಲ್ ಕಲಾಂ ಸಿ.ಬಿ.ಎಸ್.ಇ ವಸತಿ ಶಾಲೆಗೆ ಆಯ್ಕೆಯಾಗಿರುವುದು ಶ್ಲಾಘನೀಯ ಎಂದು ಶಿಕ್ಷಕ ತಿಮ್ಮನಹಳ್ಳಿ ಗಿರೀಶ್ ತಿಳಿಸಿದರು.

ಚಿಕ್ಕನಾಯಕನಹಳ್ಳಿ ತಾಲೂಕು ಬೋರನಕಣಿವೆ ವಿದ್ಯಾಸಿರಿ ಶಾಲೆಯಿಂದ ನವೋದಯ ಶಾಲೆಗೆ ಆಯ್ಕೆಯಾದ 7 ಮಕ್ಕಳಿಗೆ ಮತ್ತು ಅವರ ಪೋಷಕರಿಗೆ ಆಡಳಿತ ಮಂಡಳಿ ಮತ್ತು ಶಿಕ್ಷಕರ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ವಿದ್ಯಾಸಿರಿ ಶಾಲೆ ತುಂಬಾ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುತ್ತಿದೆ. ಮಕ್ಕಳ ಭವಿಷ್ಯವೇ ಮುಖ್ಯ ಎಂಬ ನಿಟ್ಟಿನಲ್ಲಿ ಅರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಿರುವುದಕ್ಕೆ ಸಾವಿರಾರು ಮಕ್ಕಳ ಸ್ಪರ್ಧೆಯ ನಡುವೆ ಒಂದೇ ಶಾಲೆಯ 7 ಮಕ್ಕಳು ನವೋದಯ ಶಾಲೆಗೆ ಆಯ್ಕೆ ಆಗಿರುವುದು ಸಾಕ್ಷಿಯಾಗಿದೆ. ಈ ಶಾಲೆ ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ನವೋದಯ ಶಾಲೆಗೆ ಆಯ್ಕೆಯಾದ ಮಕ್ಕಳ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನು ಹಾಗೂ ಆಡಳಿತ ಮಂಡಳಿಯವರನ್ನು ಸನ್ಮಾನಿಸಲಾಯಿತು.

237

© ಹುಳಿಯಾರು ಸಮಗ್ರ ಸುದ್ಧಿ . All Rights Reserved.