ಹಂದನಕೆರೆ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಹಾಗೂ ತಾಲೂಕು ಆರೋಗ್ಯ ಇಲಾಖೆ ಚಿಕ್ಕನಾಯಕನಹಳ್ಳಿ ವತಿಯಿಂದ ಹಂದನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸೋರಲಮಾವು ಗ್ರಾಮದಲ್ಲಿ ಹಾಗೂ ಮತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಮತಿಘಟ್ಟದಲ್ಲಿ ಕರ್ನಾಟಕ ರಂಗ ಅಧ್ಯಯನ ಟ್ರಸ್ಟ್ ಕಲಾ ತಂಡದವರಿಂದ ಸಾರ್ವಜನಿಕರಿಗೆ ಬೀದಿ ನಾಟಕದ ಮೂಲಕ ಗರ್ಭಿಣಿ ಮತ್ತು ಮಕ್ಕಳ ಹಾರೈಕೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಪರಿಸರ ನೈರ್ಮಲ್ಯ, ಕುಷ್ಟರೋಗ, ಕ್ಷಯ ರೋಗಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ರವಿಕುಮಾರ್ ರವರ ಕಲಾತಂಡ, ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.