ಫೆ. 19 ಕ್ಕೆ ಆರೋಗ್ಯ ಕೇಂದ್ರ ಉದ್ಘಾಟನೆ

ಹುಳಿಯಾರು : ಬಹುದಿನಗಳಿಂದ ಹಂದನಕೆರೆ ಹೋಬಳಿಯ ಗೂಬೇಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯಾಗದೆ ನೆನೆಗುದಿಗೆ ಬಿದ್ದಿದ್ದ ಆರೋಗ್ಯ ಕೇಂದ್ರ ಉದ್ಘಾಟನೆಗೆ ಸಿದ್ದವಾಗಿದೆ.

ಇದೇ ಫೆ. 19 ರ ಬುಧವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ನೆರವೇರಲಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ ಸೋಮಣ್ಣ, ಗೃಹ ಸಚಿವ ಡಾ|| ಜಿ ಪರಮೇಶ್ವರ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡುರಾವ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕೆ.ಎಸ್.ಆರ್.ಟಿ.ಸಿ ನಿಗಮದ ಅಧ್ಯಕ್ಷರಾದ ಎಸ್‌ ಆರ್‌ ಶ್ರೀನಿವಾಸ್‌ , ಜೆ.ಡಿ.ಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಶಾಸಕರಾದ ಸಿ.ಬಿ ಸುರೇಶ್‌ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ, ವಿಧಾನ ಪರಿಷತ್‌ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ್‌ ಎಂ ಗೌಡ, ರಾಜೇಂದ್ರ. ಆರ್‌, ಡಿ.ಟಿ. ಶ್ರೀನಿವಾಸ್ ವಿಶೇಷ ಆಹ್ವಾನಿತರಾಗಿ ಆಗಮಿಸುತ್ತಿದ್ದು, ಇನ್ನು ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

202

© ಹುಳಿಯಾರು ಸಮಗ್ರ ಸುದ್ಧಿ . All Rights Reserved.