ಚಿ.ನಾ.ಹಳ್ಳಿ : ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಚಿಕ್ಕನಾಯಕನಹಳ್ಳಿ ಇವರ ಸಹಯೋಗದೊಂದಿಗೆ ಸಾರ್ವಜನಿಕ ಆಸ್ಪತ್ರೆ ಚಿಕ್ಕನಾಯಕನಹಳ್ಳಿಯಲ್ಲಿ ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವಿ. ವೆಂಕಟರಾಮಯ್ಯ ಮಾತನಾಡಿ ಮಲೇರಿಯಾ ರೋಗದ ಬಗ್ಗೆ. ಹರಡುವ ವಿಧಾನಗಳು, ನಿಯಂತ್ರಣ ಕ್ರಮಗಳು, ಸೊಳ್ಳೆಗಳ ಉತ್ಪತ್ತಿ ತಾಣಗಳ ಬಗ್ಗೆ ಪರೀಕ್ಷಾ ವಿಧಾನಗಳು ಮತ್ತು ಚಿಕಿತ್ಸೆಯ ಬಗ್ಗೆ ಆರೋಗ್ಯ ಇಲಾಖೆಯ ಪಾತ್ರ ಮತ್ತು ಸಮುದಾಯದ ಪಾತ್ರ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳೇನು ಎಂಬುದರ ಬಗ್ಗೆ ಆರೋಗ್ಯ ಶಿಕ್ಷಣ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು ಹಾಗೂ ಆರೋಗ್ಯ ಇಲಾಖೆಗೆ ಸಾರ್ವಜನಿಕರ ಸಹಕಾರ ಮಲೇರಿಯಾ ರೋಗ ನಿಯಂತ್ರಣದಲ್ಲಿ ಅತ್ಯಗತ್ಯ ಎಂದು ತಿಳಿಸಿದರು. ತಮ್ಮ ಮನೆಯ ಸುತ್ತಮುತ್ತ ವಲಸೆ ಕಾರ್ಮಿಕರು ಯಾರಾದರೂ ಬಂದರೆ ತಕ್ಷಣ ಆರೋಗ್ಯ ಇಲಾಖೆಗೆ ತಿಳಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ. ಉಮೇಶ್, ಡಾ. ಕವಿತ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮುದ್ದೇಗೌಡ, ಎಲ್ ಸಿ ಡಿ ಆಪ್ತ ಸಮಾಲೋಚಕರಾದ ಬಾಲಕೃಷ್ಣ, ಶುರ್ಷಣಾಧಿಕಾರಿಗಳಾದ ಸೌಮ್ಯ, ಸ್ವಾತಿ, ಹಿರಿಯ ಪ್ರಯೋಗಶಾಲಾ ತಂತ್ರಜ್ಞ ಪರಮೇಶ್ ಹಾಗೂ ಮಂಜುನಾಥ್, ಸಾರ್ವಜನಿಕರು ಉಪಸ್ಥಿತರಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.